ಮೇ ತಿಂಗಳಲ್ಲಿ 1.57 ಕೋಟಿ ರೂ. GST ಸಂಗ್ರಹ: ಕೇಂದ್ರ ಹಣಕಾಸು ಇಲಾಖೆ ಮಾಹಿತಿ

ದೆಹಲಿ: ಮೇ ತಿಂಗಳಿನಲ್ಲಿ 1,57,090 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಸತತ 14 ತಿಂಗಳಿನಿಂದ ಜಿಎಸ್‌ಟಿ ಸಂಗ್ರಹ 1.50 ಲಕ್ಷ ಕೋಟಿ ರೂ. ದಾಟುತ್ತಿರುವುದು ವಿಶೇಷ.

 

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್‌ಟಿ ಸಂಗ್ರಹ 12% ರಷ್ಟು ಏರಿಕೆಯಾಗಿದೆ. ಕಳೆದ ಮೇ ತಿಂಗಳಿನಲ್ಲಿ 1,40,885 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ಈ ವರ್ಷದ ಏಪ್ರಿಲ್‌ನಲ್ಲಿ 1,87,035 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು.

ಒಟ್ಟು ಜಿಎಸ್‌ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್‌ಟಿ (CGST) ಪಾಲು 28,411 ಕೋಟಿ ರೂ. ಆಗಿದ್ದರೆ ರಾಜ್ಯ ಜಿಎಸ್‌ಟಿ (SGST) 35,828 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್‌ಟಿ (ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 81,363 ಕೋಟಿ ರೂ.ಗಳಾಗಿವೆ. ಇದರಲ್ಲಿ 11,489 ಕೋಟಿ ರೂ.(ವಸ್ತುಗಳನ್ನು ಆಮದು ಮಾಡಿಕೊಂಡಿದ್ದಕ್ಕೆ 1,057 ಕೋಟಿ ರೂ. ಸಂಗ್ರಹ ಸೇರಿ) ಸೆಸ್‌ ಕೂಡ ಸೇರಿದೆ.

ಇಂಟಿಗ್ರೇಟೆಡ್ ಜಿಎಸ್‌ಟಿಯಿಂದ ಕೇಂದ್ರ ಜಿಎಸ್‌ಟಿಗೆ 35,369 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 29,769 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಹಂಚಿಕೆಯ ಬಳಿಕ ಮೇ ತಿಂಗಳಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯ ಕ್ರಮವಾಗಿ 63,780 ಕೋಟಿ ರೂ. ಮತ್ತು 65,597 ಕೋಟಿ ರೂ.ಗಳಾಗಿವೆ.

ಕರ್ನಾಟಕದಲ್ಲಿ(Karnataka) ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 12% ರಷ್ಟು ಏರಿಕೆಯಾಗಿದ್ದು, 10,317 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು ಎರಡನೇ ಸ್ಥಾನ ಪಡೆದಿದೆ. ಕಳೆದ ಮೇ ತಿಂಗಳಿನಲ್ಲಿ 9,232 ಕೋಟಿ ರೂ. ಸಂಗ್ರಹವಾಗಿತ್ತು.

ಮಹಾರಾಷ್ಟ್ರದಲ್ಲಿ 23,536 ಕೋಟಿ ರೂ. ಸಂಗ್ರಹವಾಗಿದ್ದು ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಗುಜರಾತ್‌ 9,800 ಕೋಟಿ ರೂ., ತಮಿಳುನಾಡು 8,953 ಕೋಟಿ ರೂ., ಉತ್ತರ ಪ್ರದೇಶದಲ್ಲಿ 7,468 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ.

Loading

Leave a Reply

Your email address will not be published. Required fields are marked *