ರೈಲು ದುರಂತ ; ಮೃತರ ಸಂಖ್ಯೆ 288ಕ್ಕೆ ಏರಿಕೆ, 1091 ಜನರಿಗೆ ಗಾಯ

ವದೆಹಲಿ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದುವರೆಗೂ 288 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ದುರಂತದಲ್ಲಿ 1091ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

 

 

 

ಅಂದ್ಹಾಗೆ, ನಿನ್ನೆ ಸಂಜೆ ಕೋರಮಂಡಲ್ ಎಕ್ಸ್ಪ್ರೆಸ್ನ ಹಲವಾರು ಬೋಗಿಗಳು ಹಳಿ ತಪ್ಪಿದವು, ನಂತರ ಅದು ಎರಡನೇ ಮಾರ್ಗದಲ್ಲಿ ಮುಂಭಾಗದಿಂದ ಬರುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಈ ದುರಂತ ಸಂಭವಿಸಿದೆ. ಒಡಿಶಾ ರೈಲು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಆಗ್ನೇಯ ವಲಯದ ರೈಲ್ವೆ ಸುರಕ್ಷತಾ ಆಯುಕ್ತ (CRS) ಎ.ಎಂ.ಚೌಧರಿ ಅವರು ಪ್ರಮುಖ ರೈಲು ಅಪಘಾತದ ಬಗ್ಗೆ ತನಿಖೆ ನಡೆಸಲಿದ್ದಾರೆ.

ಈ ನಡುವೆ ರೈಲು ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಜನರು ಸಾವನ್ನಪ್ಪಿರುವುದನ್ನ ನೋಡಿ ಆಘಾತವಾಗಿದೆ ಎಂದರು. ಇನ್ನು ಗಾಯಗೊಂಡವರ ಚಿಕಿತ್ಸೆಗೆ ಸರ್ಕಾರ ಯಾವುದೇ ಅವಕಾಶವನ್ನ ಬಿಡುವುದಿಲ್ಲ. ಇದೊಂದು ಗಂಭೀರ ಘಟನೆಯಾಗಿದ್ದು, ಎಲ್ಲ ಕೋನಗಳಿಂದಲೂ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಸಾಬೀತಾದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದರು.

Loading

Leave a Reply

Your email address will not be published. Required fields are marked *