ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಶನಿವಾರ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ನ ದಿ ಓವಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ಫೈನಲ್ 2023ಗೆ ಕೇವಲ ನಾಲ್ಕು ದಿನಗಳ ಮೊದಲು ನಿವೃತ್ತಿ ಘೋಷಿಸಿದ್ದಾರೆ.
ಅಂದ್ಹಾಗೆ, ಆಸ್ಟ್ರೇಲಿಯಾದ ಬೇಸಿಗೆಯ ಕೊನೆಯಲ್ಲಿ ಟೆಸ್ಟ್ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಪಡೆಯುವುದಾಗಿ ಡೇವಿಡ್ ವಾರ್ನರ್ ಹೇಳಿದ್ದಾರೆ.
ಜನವರಿಯಲ್ಲಿ ಪಾಕಿಸ್ತಾನ ವಿರುದ್ಧದ ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದ ನಂತರ ಟೆಸ್ಟ್ ಸ್ವರೂಪಕ್ಕೆ ವಿದಾಯ ಹೇಳುವುದಾಗಿ ಡೇವಿಡ್ ವಾರ್ನರ್ ಹೇಳಿದ್ದಾರೆ. ಆದಾಗ್ಯೂ, ಕನಿಷ್ಠ 2024ರ ಟಿ20 ವಿಶ್ವಕಪ್ ವರೆಗೆ ವೈಟ್-ಬಾಲ್ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪರ ಆಡುವುದನ್ನು ಮುಂದುವರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.