ಕೋಲಾರ: ಜಿಲ್ಲೆಯ ಗೃಹ ರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ಒಬ್ಬರು 6 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿಯೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೋಲಾರದ ಗೃಹ ರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಂತ ರಾಜೇಂದ್ರನ್ ಅವರು, ಬೆಂಗಳೂರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಲು ಸುಬಾನಾಯಕ್ ಎಂಬುವರಿಂದ 6 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಸುಬಾನಾಯಕ್ ಅವರು ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಲಂಚ ಪಡೆಯುತ್ತಿದ್ದಾಗ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
6,000 ಲಂಚದ ಹಣವನ್ನು ಕೋಲಾರದ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್ ಸುಬಾನಾಯಕ್ ರಿಂದ ಪಡೆಯುವಾಗ ದಾಳಿ ನಡೆಸಿ ರೆಡ್ ಹ್ಯಾಡ್ ಆಗಿ ಹಿಡಿದಿದ್ದಾರೆ. ಆರೋಪಿ ರಾಜೇಂದ್ರನ್ ಬಂಧಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.