ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಒಂದು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್ 30, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಬಹುದು. ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಡಿಕಲ್ ಲ್ಯಾಬ್ ಟೆಕ್ನಾಲಜಿಯಲ್ಲಿ ಬಿ.ಎಸ್ಸಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಜೂನ್ 30, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 26,400 ಸಂಬಳ ಕೊಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.