ಕೋಲಾರ: ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ (Rape Case) ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಮುರುಗೇಶ್ಗೆ 30 ವರ್ಷ ಜೈಲುಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ದೇವೆಮಾನೆ ಅವರು ಆದೇಶಿಸಿದ್ದಾರೆ.
2022 ರ ಅಕ್ಟೋಬರ್ 9ರಂದು ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮುರುಗೇಶ್ ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ಮುಳಬಾಗಲು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದೇವೆಮಾನೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.