ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಬಾರದು – ಕೆಎಂಎಫ್’ಗೆ ಸಿಎಂ ಸೂಚನೆ

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಬಾರದು ಎಂದು ಕೆಎಂಎಫ್’ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರವನ್ನು ಕಡಿತ ಮಾಡದಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ಹಾಲಿನ ಪ್ರೋತ್ಸಾಹಧನ ಕಡಿತ ಮಾಡಿದರೇ ರೈತರಿಗೆ ತೊಂದರೆಯಾಗುತ್ತೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ. ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ಏಪ್ರಿಲ್ 1ರಿಂದ ಮೇ 31ರವರೆಗೆ ಪ್ರತಿ ಲೀಟರ್ ಹಾಲಿಗೆ ರೂ.2.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ ರೂ.1.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.

Loading

Leave a Reply

Your email address will not be published. Required fields are marked *