ಮನೆ ಬೀಗ ಮುರಿದು ಮನೆಯಲ್ಲಿದ್ದ ನಗದು ಚಿನ್ನಾಭರಣ ದೋಚಿ ಕಳ್ಳರು ಎಸ್ಕೇಪ್ ಆಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 52 ವರ್ಷದ ಚೌಡರೆಡ್ಡಿ ಎಂಬುವರ ಮನೆಯ ಬೀಗ ಮುರಿದು ಕಳ್ಳತನ ಮಾಡಲಾಗಿದ್ದು, ಬೆಂಗಳೂರಿನ ಗಾರೆಬಾವಿ ಪಾಳ್ಯದಲ್ಲಿ ಘಟನೆ ಜರುಗಿದೆ. ಚೌಡರೆಡ್ಡಿ ಅವರು ಕುಟುಂಬ ಸಮೇತ ಊರಿಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯ ಫ್ರಂಟ್ ಡೋರ್ ಮುರಿದು ಕಳ್ಳತನ ಮಾಡಿದ್ದಾರೆ. 25 ಲಕ್ಷ ನಗದು ಹಾಗು ಚಿನ್ನದ ವಡವೆಗಳು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಊರಿಂದ ಬಂದ ನಂತರ ಕಳ್ಳತನ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆ, ಚೌಡರೆಡ್ಡಿ ಅವರು ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.