ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ

ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬುವವರ ಜತೆ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಬೆಂಗಳೂರಿನ ಟ್ಯಾಮರಿಂಡ್ ಟ್ರೀ ನಲ್ಲಿ ನೆರವೇರಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು- ವರರನ್ನು ಹರಸಿದ್ದಾರೆ. ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು. ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ನಿರ್ಮಲ ಸೀತಾರಾಮನ್ ಅವರಿಗೆ ನೀಡಲಾಯಿತು. ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರು. ಅವರ ಇಚ್ಛೆಯ ಪ್ರಕಾರ ಪುತ್ರಿಯ ವಿವಾಹ ನೆರವೇರಿದೆ.

Loading

Leave a Reply

Your email address will not be published. Required fields are marked *