ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರುನಗರ ಘಟಕದ ವತಿಯಿಂದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಮೂರುವರೆ ಕೋಟಿ ಅನುದಾನ ಮೀಸಲು ಇಡಬೇಕು ಎಂದು ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ತುಷಾರ್ ಗಿರಿನಾಥ್ ರವರು ಮಾತನಾಡಿ, ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಬೆಳಸಲು ಪ್ರತಿ ವರ್ಷ 1ಕೋಟಿ ರೂಪಾಯಿ ಜಾಹಿರಾತು ನೀಡಲಾಗುತ್ತಿದೆ. ಈ ಬಾರಿ ಪತ್ರಕರ್ತರ ಸಂಘವು ಸಲ್ಲಿಸಿದ ಮನವಿ ಮೇರೆಗೆ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಜಾಹಿರಾತು ನೀಡಲು 2ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದರು. ಬಳಿಕ ಕೆ.ಸತ್ಯನಾರಾಯಣ್ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರ ಜೊತೆಯಲ್ಲಿ ಇಂದು ಮುಖ್ಯ ಆಯುಕ್ತರನ್ನು ಭೇಟಿ ಮಾಡಿ. 8ಜಾಹಿರಾತು ತಲಾ 10ರೂಪಾಯಿಯಂತೆ , ಮೂರುವರೆ ಕೋಟಿ ನೀಡಬೇಕು ಮನವಿ ಸಲ್ಲಿಸಲಾಗಿದೆ. ಪತ್ರಕರ್ತರ ಸಮಸ್ಯೆಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘವು ಸತತ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.