ರಾಜ್ಯ ಸರ್ಕಾರದ ವಿರುದ್ಧ ಗೃಹಜ್ಯೋತಿ ಯೋಜನೆ ವಿಚಾರವಾಗಿ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ನದಿ ದಾಟಿದ ಮೇಲೆ ಅಂಬಿಗ ಯಾಕೆಂಬ ಧೋರಣೆಯಲ್ಲೀಗ ಸಿದ್ದರಾಮಯ್ಯ ಸರ್ಕಾರವಿದೆ. ಬದುಕು ಕಟ್ಟಿಕೊಂಡ ಹೆಚ್ಚಿನವರು ಬಾಡಿಗೆ ಮನೆಗಳಲ್ಲಿ ವಾಸವಾಗಿರುತ್ತಾರೆ. ಬಾಡಿಗೆ ಮನೆಯಲ್ಲಿರುವವರ ಪಾಲಿಗೆ ಉಚಿತ ವಿದ್ಯುತ್ ಗಗನ ಕುಸುಮವಾಗಿದೆ. ಅಷ್ಟೇ ಅಲ್ಲ ಹೊಸದಾಗಿ ಮನೆ ಕಟ್ಟಿದವರಿಗೆ ಈ ಯೋಜನೆ ಅಸ್ಪೃಶ್ಯ. ಉಚಿತ ಬಿಡಿ, ಮೊದಲು ವಿದ್ಯುತ್ ಪೂರೈಸಿ ಎಂದು ಜನ ಶಾಪ ಹಾಕುತ್ತಿದ್ದಾರೆ ಎಂದು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.