ಗೃಹಲಕ್ಷ್ಮಿ ಯೋಜನೆ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅಥವಾ ನೇರವಾಗಿ ಕೂಡ ಅರ್ಜಿ ಸಲ್ಲಿಸಬಹುದು ಎಂದು ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೆದುರಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆ ನಮ್ಮ ಸರ್ಕಾರದ ಧ್ಯೇಯ ರೇಷನ್ ಕಾರ್ಡ್ ಹೋಲ್ಡರ್ ಮುಖ್ಯಸ್ಥೆಗೆ ಇದರ ಲಾಭ ಸಿಗಲಿದೆ.ಕೆಲವು ಕಾರಣಗಳಿಂದ ಲೇಟ್ ಆಗಿದೆ ಜೂನ್ 16 ತಾರೀಖು ಅಂದ್ರೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು ಹಾಗೆ ಆನ್ ಲೈನ್ ಪೋರ್ಟಲ್ ಹಾಗೂ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ನಾಳೆ ಶಕ್ತಿ ಭವನದಲ್ಲಿ ಸಿದ್ದರಾಮಯ್ಯನವರಿಂದ ಸೇವಾ ಸಿಂಧು ವೆಬ್ ಲಾಂಚ್ ಆಗಲಿದ್ದು, ನಾಳೆ ಮಧ್ಯಾಹ್ನ 1.30ರಿಂದ ಅರ್ಜಿ ಸಲ್ಲಿಕೆ ಮಾಡಬಬಹುದು. ‘ಗೃಹಲಕ್ಷ್ಮೀ’ಯೋಜನೆಗೆ ವಾರ್ಷಿಕ ಅಂದಾಜು 30 ಸಾವಿರ ಕೋಟಿ ವೆಚ್ಚ ನಿರೀಕ್ಷೆ ಇದ್ದು, ಆಗಸ್ಟ್ 18ರಂದು ಬೆಳಗಾವಿ ಅಥವಾ ಹುಬ್ಬಳ್ಳಿಯಲ್ಲಿ ‘ಗೃಹಲಕ್ಷ್ಮೀ’ಗೆ ಚಾಲನೆಗೆ ಸಿಎಂ ಸಿದ್ದರಾಮಯ್ಯನವರ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು

Loading

Leave a Reply

Your email address will not be published. Required fields are marked *