ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ವಶ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಶಿವಮೊಗ್ಗದಲ್ಲಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದವರನ್ನು ವಶಕ್ಕೆ ಪಡೆಯಲಾಗಿದೆ. ಹೌದು ವಿದ್ಯುತ್ ದರ ಏರಿಕೆ ಖಂಡಿಸಿ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಬಿವೈ ರಾಘವೇಂದ್ರ  ಹಾಗೂ ಇತರ ಹಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಾ ನಗರದಲ್ಲಿರುವ ಮೆಸ್ಕಾಂ ಕಚೇರಿಯನ್ನು ಮುತ್ತಿಗೆ ಹಾಕುವ ಪ್ರಯತ್ನದಲ್ಲಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು. ಸುಳ್ಳು ಭರವಸಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂದು ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು. ಇದೇ ತಿಂಗಳು 18ರಂದು ಬಿಜೆಪಿ ಕಾರ್ಯಕರ್ತರು ವಿದ್ಯುತ್ ಬೆಲೆಯೇರಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಲಿದ್ದಾರೆ.

Loading

Leave a Reply

Your email address will not be published. Required fields are marked *