ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಟವಾಡುವಾಗ ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಶೃತ್ ಬೆಳಗಲಿ(9)ಮೃತ ವಿದ್ಯಾರ್ಥಿ. ನಿರ್ಮಾಣ ಹಂತದ ಕಟ್ಟಡದ ಕೆಳಭಾಗದಲ್ಲಿ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿಗಳ ಮೇಲೆ ಗೋಡೆ ಬಿದ್ದಿದೆ. ಓರ್ವ ವಿದ್ಯಾರ್ಥಿ ಮೃತ ಪಟ್ಟರೆ, ಮತ್ತೋರ್ವ ವಿದ್ಯಾರ್ಥಿ ಪ್ರಜ್ವಲ್ ನಾಗಾವಿ ಎಂಬುವವರಿಗೆ ಗಾಯವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.