ಬೆಂಗಳೂರು: ಶಕ್ತಿಭವನದಲ್ಲಿ ಕೊರಿಯಾದ ರಾಯಭಾರಿ ಚಾಂಗ್ ಜೇ ಬಾಕ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದರು. ಈ ವೇಳೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.
ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.