ಆಸ್ಟ್ರೇಲಿಯಾ (ENG vs AUS Ashes 2023 )ವಿರುದ್ಧದ ಪ್ರತಿಷ್ಠಿತ ಆಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಜೋ ರೂಟ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.
ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಝಾಕ್ ಕ್ರಾಲಿ (61) ಉತ್ತಮ ಆರಂಭ ಒದಗಿಸಿದ್ದರು. ಆದರೆ ಮತ್ತೊಂದೆಡೆ ಬೆನ್ ಡಕೆಟ್ (12) ಹಾಗೂ ಅಲಿ ಪೋಪ್ (31) ಬೇಗನೆ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ್ದ ರೂಟ್ ಸ್ವಿಚ್ ಹಿಟ್ಗಳ ಮೂಲಕ ಗಮನ ಸೆಳೆದರು. ಅಲ್ಲದೆ ಆಸೀಸ್ ವೇಗಿಗಳನ್ನು ಮನಸೊ ಇಚ್ಛೆ ದಂಡಿಸುವ ಮೂಲಕ 152 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್ನೊಂದಿಗೆ ಅಜೇಯ 118 ರನ್ ಬಾರಿಸಿದರು. ಈ ಹಂತದಲ್ಲಿ ಇಂಗ್ಲೆಂಡ್ ತಂಡವು 393/8 ರನ್ಗಳಿಗೆ ಡಿಕ್ಲೇರ್ ಘೋಷಿಸಿತು. ವಿಶೇಷ ಎಂದರೆ ಈ ಅಜೇಯ ಶತಕದೊಂದಿಗೆ ಜೋ ರೂಟ್ ಮೂರು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.