ಒಂದೂವರೆ ತಿಂಗಳಲ್ಲಿ ರಾಜ್ಯದ ಪ್ರಗತಿಯನ್ನ ಹಳಿ ತಪ್ಪಿಸಿದ ಸರ್ಕಾರ; ಕಿಡಿಕಾರಿದ ಬೊಮ್ಮಾಯಿ

ಬೆಂಗಳೂರು: ಒಂದೂವರೆ ತಿಂಗಳಲ್ಲಿ ರಾಜ್ಯದ ಪ್ರಗತಿಯನ್ನ ಹಳಿ ತಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಇನ್ನು ಸ್ವಲ್ಪ ದಿನದಲ್ಲಿ ರಾಜ್ಯದಲ್ಲಿ ಸರ್ಕಾರಿ ಬಸ್ ನಿಂತು ಹೋಗುತ್ತೆ. ರಾಜ್ಯದಲ್ಲಿ ಯಾಕೆ ಅಭಿವೃದ್ಧಿ ಕಾರ್ಯ ನಿಲ್ಲಿಸಿದ್ದೀರಿ, ಸಚಿವರು ಓಪನ್​ ಆಗಿಯೇ ಐಎಎಸ್, IPS ವರ್ಗಾವಣೆಗೆ ಕಮಿಷನ್ ಫಿಕ್ಸ್​ ಮಾಡುತ್ತಿದ್ದು, ವರ್ಗಾವಣೆಯಲ್ಲಿ ದೊಡ್ಡ ದಂಧೆ ಶುರುವಾಗಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು ಒಂದು ತಿಂಗಳು ಕಳೆದರೂ ಯಾರೂ ತಮ್ಮ ಇಲಾಖೆಗಳ ಪ್ರಗತಿಯ ಬಗ್ಗೆ ಮಾತನಾಡುತ್ತಿಲ್ಲ. ಮಳೆಗಾಲ ಆರಂಭವಾಗುತ್ತಿದೆ, ಒಂದು ವರ್ಷದ ಕಾಮಗಾರಿಗಳನ್ನು ಅಸ್ತವ್ಯಸ್ತಗೊಳಿಸಲು ಮುಂದಾಗಿದ್ದಾರೆ’ ಎಂದರು.

‘ಅಧಿಕಾರಕ್ಕೆ ಬಂದ ದಿನದಿಂದಲೇ ಕಾಂಗ್ರೆಸ್‌ ಸರ್ಕಾರ ಗೊಂದಲದ ಗೂಡಾಗಿದೆ. ಉಚಿತ ಬಸ್‌ ಪ್ರಯಾಣವೂ ಸೇರಿ ಗ್ಯಾರಂಟಿ ಯೋಜನೆಗಳು ಅಧ್ವಾನ ಆಗಿವೆ’ ಎಂದು ಟೀಕಿಸಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷ ಪೂರ್ಣಗೊಳಿಸುವ ಸಾಧ್ಯತೆ ಇಲ್ಲ ಎಂದು ಅವರ ಸಂಪುಟ ಸಹೋದ್ಯೋಗಿಗಳೇ ಹೇಳುತ್ತಿದ್ದಾರೆ ಎಂದೂ ಬೊಮ್ಮಾಯಿ ಹೇಳಿದರು.

ಇನ್ನೂ ನಮ್ಮ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ ಜತೆ ಸೇರಿಕೊಂಡು ಸುಳ್ಳು ಆರೋಪಗಳನ್ನು ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಲ್ಲಿ ಹೋಗಿದ್ದಾರೆ? ಗುತ್ತಿಗೆದಾರರ ಬಿಲ್‌ನ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ. ಸಚಿವರು ರೇಟ್‌ ಫಿಕ್ಸ್‌ ಮಾಡಿಕೊಳ್ಳುತ್ತಿದ್ದಾರೆ. ಕೆಂಪಣ್ಣ ಏಕೆ ಮಾತನಾಡುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ಬಹುತೇಕ ಸಚಿವರು ಹಿಂದಿನ ಸರ್ಕಾರದ ಚಾಲ್ತಿಯಲ್ಲಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಿದ್ದಾರೆ’ ಎಂದು ದೂರಿದರು.

Loading

Leave a Reply

Your email address will not be published. Required fields are marked *