ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥ

ಬೀದರ್: ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥರಾದ ಘಟನೆ ಬೀದರ ಜಿಲ್ಲೆಯ ಔರಾದ್ ತಾಲೂಕಿನ ಕರಕ್ಯಾಳ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಏಕಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಕ್ಯಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬದ 8 ಮಂದಿ ಸೇರಿದಂತೆ ಒಟ್ಟು 18 ಮಂದಿ ಅಸ್ವಸ್ಥಗೊಂಡಿದ್ದಾರೆ.
ತೀವ್ರ ವಾಂತಿ-ಬೇಧಿಯಿಂದ ಅಸ್ವಸ್ಥಗೊಂಡ ಎಲ್ಲರನ್ನೂ ನಿನ್ನೆ ಔರಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ…ಗ್ರಾಮದಲ್ಲಿ ಸರಬರಾಜಾಗುವ ಪೈಪ್‌ಲೈನ್ ನೀರು ಕುಡಿದು ಈ ಅವಾಂತರ ಸೃಷ್ಟಿಯಾಗಿದೆ ಎಂದು ಗ್ರಾಮಸ್ಥರು ಮಾಹಿತಿ. ಸಂಬಂಧಪಟ್ಟ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯವೇ ಎದ್ದು ಕಾಣುತ್ತಿದೆ..
ಔರಾದ್ ತಾಲೂಕಿನ ಕರಕ್ಯಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥರಾಗಿ ಔರಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದೆ ಗ್ರಾಮಸ್ಥರನ್ನೂ ಜಿಲ್ಲಾಧಿ ಕಾರಿ ಗೋವಿಂದ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಜಿಲ್ಲಾಪಂಚಾಯತ್ ಸಿಇಒ ಶಿಲ್ಪಾಎಂ ಸಾಥ್ ನೀಡಿದರು.

Loading

Leave a Reply

Your email address will not be published. Required fields are marked *