ಬೆಂಗಳೂರು: ವಿದ್ಯುತ್ ದರ ಏರಿಕೆಗೆ ಬ್ರೇಕ್ ಹಾಕದೇ ಇದ್ದರೆ ಹೋಟೆಲ್ ಆಹಾರಗಳ ದರ ಏರಿಕೆ ಅನಿವಾರ್ಯ ಎಂದು ಸರ್ಕಾರಕ್ಕೆ ಹೋಟೆಲ್ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್, ಈಗ ಹಾಲಿನ ದರ ಏರಬಹುದು ಎಂಬ ಮುನ್ಸೂಚನೆ ಸಿಕ್ಕಿದೆ. ಇನ್ನೊಂದು ಕಡೆ ರೈಸ್ ಮಿಲ್ಗಳು ಅಕ್ಕಿ ದರವನ್ನು ಏರಿಸುವುದಾಗಿ ಹೇಳಿದ್ದಾರೆ. ಹೀಗಾಗಿ ನಾವು ದರ ಏರಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ. ಈಗಾಗಲೇ ದಿನಸಿ, ತರಕಾರಿಗಳ ದರ ಏರಿಕೆಯಾಗಿದೆ. ವಿದ್ಯುತ್ ದರ ಏರಿಕೆ ಎಲ್ಲರಿಗೂ ದೊಡ್ಡ ಶಾಕ್ ಕೊಟ್ಟಿದೆ. ಇದಕ್ಕೆ ಬ್ರೇಕ್ ಹಾಕದೇ ಇದ್ದರೆ ದರ ಏರಿಕೆ ಅನಿವಾರ್ಯ ಎಂದು ತಿಳಿಸಿದ್ದಾರೆ.