ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೆಲ್ಲುತ್ತಿದೆ. ಆದರೆ ಪಕ್ಷ ನೀಡಿದ ಟಾಸ್ಕ್ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಎರಡರಲ್ಲೂ ಸೋತು ಈಗ ನಿರುದ್ಯೋಗಿ ಆಗಿದ್ದೇನೆ ಎಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.