ಬೆಂಗಳೂರು ;- ನಗರದ ಹಲವೆಡೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ.
ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂ.
ನಗದು ಪತ್ತೆಯಾಗಿದೆ. ಅಜಿತ್ ಕೆಲ ದಿನಗಳ ಹಿಂದೆ ಕೆ.ಆರ್.ಪುರಂನಿಂದ ವರ್ಗಾವಣೆಯಾಗಿದ್ದ . ಇವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸುಮಾರು 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದ್ದು, ಅನೇಕ ದಾಖಲಾತಿಗಳ ಪರಿಶೀಲನೆಯಲ್ಲಿ ಲೋಕಾಯುಕ್ತ ತೊಡಗಿದೆ.