ಬೆಂಗಳೂರು ;- ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯೊರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಬಳಿ ನಡೆದಿದೆ.
ಈ ಸಂಬಂಧ ತಲಘಟ್ಟಪುರಿಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿಯ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.
ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.