ಜುಲೈ 3ರಿಂದ 14ರವರೆಗೆ ಅಧಿವೇಶನ: ವಿಧಾನಸೌಧ ಸುತ್ತಮುತ್ತಲಿನಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು ;- ವಿಧಾನಮಂಡಲದ ಅಧಿವೇಶನವು ಜುಲೈ 3ರಿಂದ 14ರವರೆಗೆ ನಡೆಯಲಿದೆ. ಹೀಗಾಗಿ ವಿಧಾನಸೌಧ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಜುಲೈ 3ರಿಂದ 14ರವರೆಗೆ ನಿತ್ಯವೂ ಬೆಳಿಗ್ಗೆ 6 ಗಂಟೆಯಿಂದ ತಡರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ಹೇಳಿದ್ದಾರೆ.
ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು. ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ, ಸಭೆ ನಡೆಸಬಾರದು. ಶಸ್ತಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಚಾಕು ಹಾಗೂ ಇತರ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡಬಾರದು ಎಂದು ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *