ಆಗಸ್ಟ್’ನಿಂದ ಗೃಹಲಕ್ಷ್ಮಿ ಯೋಜನೆ ಮನೆಯ ಯಜಮಾನಿಗೆ ಸಿಗುತ್ತದೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಆಗಸ್ಟ್‌’ನಿಂದ ಗೃಹಲಕ್ಷ್ಮಿ (Gruhalakshmi) ಯೋಜನೆ ಮನೆಯ ಯಜಮಾನಿಗೆ ಸಿಗುತ್ತದೆ. ಕೊಟ್ಟ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ. ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಿರೀಕ್ಷೆಗೆ ತಕ್ಕ ಹಾಗೆ ಕೆಲಸ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ (Belagavi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 14ರಿಂದ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ. ಜುಲೈ 3 ಅಥವಾ 4ನೇ ತಾರೀಖು ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದರು. ರಾಜ್ಯ ಕಾಂಗ್ರೆಸ್ (Congress) ಸರ್ಕಾರದಲ್ಲಿ ವೈಎಸ್‌ಟಿ (YST) ಸಂಗ್ರಹ ಎಂಬ ಹೆಚ್‌ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,

ಕುಮಾರಸ್ವಾಮಿಯವರು (H.D.Kumaraswamy) ಕೂಡಾ ಸರ್ಕಾರ ನಡೆಸಿದಂತ ಅನುಭವ ಇದ್ದವರು. ಕುಮಾರಸ್ವಾಮಿ ಅಣ್ಣ ಹಿರಿಯರು, ರಾಜಕೀಯ ಮುತ್ಸದ್ಧಿಗಳು. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಸರ್ಕಾರ ರಚನೆ ಆಗಿ ಈಗ ಒಂದು ತಿಂಗಳು ಐದು ದಿನ ಆಗಿದೆ. ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ ಎಂದು ನಯವಾಗಿ ತಿರುಗೇಟು ನೀಡಿದರು.

 

Loading

Leave a Reply

Your email address will not be published. Required fields are marked *