ಕಲಬುರ್ಗಿ ;- ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನಹಿಪ್ಪರಗಾ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ಈಜಲು ಹೋದ ಬಾಲಕರಿಬ್ಬರು ಭೀಮಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜರುಗಿದೆ.
ದೇವಿಂದ್ರ ಹೊಸಮನಿ (17) ಹಾಗೂ ರಾಮು ದೊಡ್ಡಮನಿ(13) ಮೃತ ದುರ್ದೈವಿಗಳು.
ನೀರಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯವನ್ನು ಗ್ರಾಮಸ್ಥರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗ್ರಾಮಸ್ಥರ ಸಹಾಯದಿಂದ ಮೃತ ದೇಹಗಳನ್ನು ನೀರಿನಿಂದ ಹೊರಗೆ ತೆಗೆದಿದ್ದಾರೆ. ಮೃತ ದೇಹಗಳನ್ನು ಹೊರ ತರುತ್ತಿದ್ದಂತೆ ಬಾಲಕರು ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಕಂಬನಿ ಮಿಡಿದರು. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.