ಬೆಂಗಳೂರು: ಇಂದು ವಿಧಾನಸೌಧದ ಒಳಗಡೆ ಮತ್ತು ಹೊರಗಡೆ ಏಕಕಾಲದಲ್ಲಿ 2 ಕಡೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಒತ್ತಡ ತರಲು ಬಿಜೆಪಿ ತಂತ್ರ ಹೆಣೆದಿದೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬೆಳಗ್ಗೆ 10.30 ರಿಂದ ಸಂಜೆಯವರೆಗೆ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಡಿ.ವಿ ಸದಾನಂದ ಗೌಡ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಮಾಜಿ ಸಚಿವರು, ಸಂಸದರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ.