ಬೆಂಗಳೂರು: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರಕ್ಕೆ ಸಂಬಂಧಿಸಿ ಬುಧವಾರ ಬೆಳಗ್ಗೆ 10ಕ್ಕೆ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರು ದೇಶಾದ್ಯಂತ ಮೌನ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ‘ಕೈ’ ನಾಯಕರಿಂದ ಮೌನ ಪ್ರತಿಭಟನೆ ನಡೆಯಲಿದೆ. ಗಾಂಧಿ ಪ್ರತಿಮೆ ಅಥವಾ ಸ್ವಾತಂತ್ರ್ಯ ಹೋರಾಟಗಾರ ಪ್ರತಿಮೆ ಬಳಿ ಧರಣಿ ನಡೆಸಲಿದ್ದಾರೆ.