ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು: ಶಾಸಕ ಸಿದ್ದು ಸವದಿ

ಬೆಂಗಳೂರು: ಜೈನ ಮುನಿಗಳ  ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ನೀಡಿ ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ ಎಂದು ಹೇಳಿದರು.
ಇನ್ನು ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ. ಈ ಕೃತ್ಯದ ಹಿಂದೆ ಹಿಂದೆ ಐಸಿಸ್ ಉಗ್ರರ ಚಿತಾವಣೆ ಇದೆ. ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ. ಸರ್ವ ಸಂಗತ್ಯಾಗ ಮಾಡಿದ ಮುನಿಗಳ ಹತ್ಯೆಯ ಹಿಂದೆ ಪಿತೂರಿ ಇದೆ. ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು. ಭಕ್ತರು ಆರ್ಥಿಕ ವ್ಯವಹಾರ ಮಾಡಿರಬಹುದು. ಸಂಸ್ಕಾರ ಕೊಡುವ ಮುನಿಗಳು ಆರ್ಥಿಕ ವ್ಯವಹಾರ ಮಾಡಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸರ್ಕಾರ ಮುಚ್ಚಿಡುವ ಯತ್ನ ಮಾಡುತ್ತಿದೆ ಎಂದು ದೂರಿದರು.

Loading

Leave a Reply

Your email address will not be published. Required fields are marked *