ಬೆಂಗಳೂರು: ನಾನು ಒಕ್ಕಲಿಗ ಎಂಬ ಕಾರಣಕ್ಕೆ ಹೆಚ್ಡಿಕೆ ಟಾರ್ಗೆಟ್ ಮಾಡ್ತಿದ್ದಾರೆ ಎಂದು ವಿಧಾನಸೌಧದಲ್ಲಿ ಹೆಚ್ಡಿಕೆ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ನಾನು H.D.ದೇವೇಗೌಡರು, ಅವರ ಕುಟುಂಬದ ಬಗ್ಗೆ ಮಾತಾಡಿಲ್ಲ. ಹೆಚ್.ಡಿ.ಕುಮಾರಸ್ವಾಮಿ ವಿಚಾರ ಎತ್ತಿದ್ರೆ ಸಾಕು ಕುಟುಂಬ ಅಂತಾರೆ. ಕುಮಾರಸ್ವಾಮಿ ಯಾವಾಗಲೂ ಕುಟುಂಬದ ಜಪ ಮಾಡಬಾರದು. HDK ಹತಾಶರಾಗಿದ್ದಾರೋ ಏನೋ ಗೊತ್ತಿಲ್ಲ. ಲೋಕಸಭೆ ಚುನಾವಣೆ ಇದೆ, ಹಾಗಾಗಿ ನನ್ನ ಮಂಡ್ಯ ಅಂತಿದ್ದಾರೆ ಎಂದು ವಿಧಾನಸೌಧದಲ್ಲಿ ಹೆಚ್ಡಿಕೆ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.