ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರುಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಇಂದು ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳ ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಸಿದ್ದರು.

ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು ಬಿ ರಿಪೋರ್ಟ್ ಅಂಗೀಕರಿಸಿದೆ.

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್​ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

 

Loading

Leave a Reply

Your email address will not be published. Required fields are marked *