ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡುವ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು.ಭಾರತಕ್ಕೆ ಎದ್ದುನಿತ್ತು ಗೌರವ ನೀಡುತ್ತಿರುವುದು ಪ್ರಧಾನಿ ಮೋದಿ ಅವರ ಕಾರಣಕ್ಕೆ.
ನರೇಂದ್ರ ಮೋದಿ ಅವರಿಗೆ ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಬೆಂಬಲ ಕೊಡಬೇಕು. ಇಂತಹ ಅಪೇಕ್ಷೆ ಎಲ್ಲಾ ರಾಜಕೀಯ ಪಾರ್ಟಿಯಲ್ಲೂ ಇದೆ.
ಇದೆ ಅಪೇಕ್ಷೆಯನ್ನ ಜೆಡಿಎಸ್ನಿಂದ ನಿರೀಕ್ಷೆ ಮಾಡುತ್ತೇವೆ. ದೇಶದಲ್ಲಿರುವ ರಾಜಕೀಯ ಪಕ್ಷಗಳು ಪ್ರಧಾನಿ ಮೋದಿ ಜೊತೆ ಜೋಡಣೆ ಆಗುತ್ತಿದೆ. ಭಾರತ ನೂರನೇ ವರ್ಷದ ಸಂಭ್ರಮಾಚರಣೆಯ ದಿನ ವಿಶ್ವದಲ್ಲೇ ನಂಬರ್ ಓನ್ ಆಗಿರಬೇಕು ಎಂಬುದು ಮೋದಿ ಅವರ ಆಸೆ ಎಂದರು.