ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ.
ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರ ರಾಗಿರತಕ್ಕದ್ದಲ್ಲ. ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು.