ಬೆಂಗಳೂರು: ಇಂದು ಮಹಾ ಮೈತ್ರಿಕೂಟ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದರು.
ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ AICC ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಆಗಮಿಸಿದರು.
HAL ವಿಮಾನ ನಿಲ್ದಾಣಕ್ಕೆ ಆಗಮಿಸಿದಂತ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.