ಕೇರಳ ;- ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ನಿಧನಕ್ಕೆ ಕೇರಳ ಸರ್ಕಾರ ಎರಡು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಮಂಗಳವಾರ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.