ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಎಂಬ ಹೆಸರಿಡಲಾಗಿದೆ: ಖರ್ಗೆ

ಬೆಂಗಳೂರು: ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಎಂಬ ಹೆಸರಿಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವ ಕಾಪಾಡುವ ನಿಟ್ಟಿನಲ್ಲಿ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ 26 ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ ಎಂದರು.ಇದು ಅತ್ಯಂತ ಪ್ರಮುಖ ಸಭೆ ಆಗಿತ್ತು. ಪ್ರಜಾಪ್ರಭುತ್ವ ರಕ್ಷಣೆಗೆ ದೇಶದ ಜನರ ರಕ್ಷಣೆಗೆ ಅತ್ಯಗತ್ಯವಾಗಿತ್ತು. ಹೀಗಾಗಿ ನಾವೆಲ್ಲ ಒಂದುಗೂಡಿ ಒಂದೇ ಧ್ವನಿಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಒಕ್ಕೂಟಕ್ಕೆ INDIA (Indian National Development Inclusive Alliance) ಎಂದು ಹೆಸರಿಟ್ಟಿದ್ದೇವೆ. ಮುಂದಿನ ಸಭೆ ಆಗಸ್ಟ್ 6ಕ್ಕೆ ಮುಂಬೈನಲ್ಲಿ ನಡೆಯಲಿದೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್ ನಿರ್ಣಯಕ್ಕೆ ಉಪ ಸಮಿತಿ ರಚನೆ ಮಾಡಲಾಗುವುದು ಎಂದರು.

Loading

Leave a Reply

Your email address will not be published. Required fields are marked *