ಚಿಕ್ಕಬಳ್ಳಾಪುರ : ಸರ್ಕಾರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೋರ್ವಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಗಡಿಗವಾರ್ಲಹಳ್ಳಿ ಗ್ರಾಮದ ಬಳಿ ಇರುವ ಸರ್ಕಾರಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.. ಕೋಡಿಗಲ್ ಗ್ರಾಮದ ನೈದಮ್ಮ ಹಾಗೂ ನರಸಿಂಹಪ್ಪ ದಂಪತಿಗಳ ಪುತ್ರಿ 8 ನೇ ತರಗತಿ ಓದುತ್ತಿರುವ 14 ವರ್ಷದ
ತನುಶ್ರೀ ಮೃತ ವಿದ್ಯಾರ್ಥಿನಿಯಾಗಿದ್ದು.. ರಾತ್ರಿ ಊಟ ಮಾಡಿ ಮಲಗಿ ಬೆಳಗ್ಗೆ ಅಸ್ವಸ್ತಗೊಂಡಿದ್ದ ತನುಶ್ರೀ ಯನ್ನು ಹಾಸ್ಟೆಲ್ ಸಿಬ್ಬಂದಿ ಕೆಂಚಾರ್ಲಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ತನುಶ್ರೀ ಮೃತಪಟ್ಟಿದ್ದಾಳೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಮೃತಳ ಸಾವಿಗೆ ಕಾರಣವಾದರೂ ಏನು ಅನ್ನೋದು ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ..