ಬೆಂಗಳೂರು: ಬಿಜೆಪಿಯ ಹತ್ತು ಜನ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಅಮಾನತು ಮಾಡಿರುವ ಸ್ಪೀಕರ್ ಯು.ಟಿ. ಖಾದರ್ ಆದೇಶ ಖಂಡಿಸಿ ಬಿಜೆಪಿ ಸದಸ್ಯರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ.
ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಮೂಲಕ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯರು ಕೂಡಾ ಇದಕ್ಕೆ ಸಾಥ್ ನೀಡಿದ್ದಾರೆ. ಜೆಡಿಎಸ್ ಕೂಡಾ ಸದನಕ್ಕೆ ಹಾಜರಾಗಿಲ್ಲ.
ಐಎಎಸ್ ಅಧಿಕಾರಿಗಳನ್ನು ವಿಪಕ್ಷ ನಾಯಕರ ಸ್ವಾಗತಕ್ಕೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಬುಧವಾರ ಧರಣಿ ನಡೆಸಿದ್ದರು.
ನಿನ್ನೆ ಡೆಪ್ಯೂಟಿ ಸ್ಪೀಕರ್ ಮೇಲೆ ಕಾಗದ ಹರಿದು ಹಾಕಿದ್ದರು. ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಹತ್ತು ಮಂದಿ ಶಾಸಕರನ್ನು ಅಮಾನತು ಮಾಡಲಾಗಿತ್ತು.
ಬಳಿಕ ಸದನದಿಂದ ಅಮಾನತುಗೊಂಡ ಸದಸ್ಯರನ್ನು ಮಾರ್ಷಲ್ ಗಳು ಹೊರ ಹಾಕಿದ್ದರು. ಈ ವೇಳೆ ನಡೆದ ನೂಕಾಟ ತಳ್ಳಾಟದಲ್ಲಿ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ ಅಸ್ವಸ್ಥಗೊಂಡಿದ್ದರು.