ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್

ಬೆಂಗಳೂರು: ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಮಾಡಲು ಮುಂದಾಗಿವೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು  ಈಗಾಗಲೇ ಜಾರಿಗೊಳಿಸಲಾಗಿದ್ದು, ಮಹಿಳೆಯರು ಆಟೋ ಹಾಗೂ ಖಾಸಗಿ ಬಸ್ ಬಿಟ್ಟು ಕೆಎಸ್ಆರ್ಟಿಸಿ ಬಸ್ ಮೊರೆ ಹೋಗಿದ್ದಾರೆ. ಏತನ್ಮಧ್ಯೆ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ಕಂಗಾಲಾಗಿದ್ದಾರೆ. ಜೊತೆಗೆ ಆಟೋರಿಕ್ಷಾಗಳಿಗೂ ಬಾಡಿಗೆ ಸಿಗುತ್ತಿಲ್ಲ ಎಂದು ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೀಗಾಗಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ಗೆ ಮುಂದಾಗಿವೆ. ಹೀಗಾಗಿ ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರ ವರೆಗೆ ಓಲಾ, ಉಬರ್, ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಸಂಚಾರ ಇರಲ್ಲ.
ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ್ಯಾಲಿ ನಡೆಸುವ ಮೂಲಕ ಸರ್ಕಾರ ಗಮನ ಸೆಳೆಯಲು ರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತೀರ್ಮಾನಿಸಿದೆ

Loading

Leave a Reply

Your email address will not be published. Required fields are marked *