ಬೆಂಗಳೂರು: ನಮ್ಮ ಪಕ್ಷದ ಶಾಸಕರನ್ನು ಸದನದಿಂದ ಹೊರಹಾಕಿದ್ದಾರೆ. ದಲಿತರು, ಹಿಂದುಳಿದವರ ಪರ ಎಂದು ಈ ಸರ್ಕಾರ ಹೇಳಿಕೊಳ್ಳುತ್ತೆ. ಆದರೆ ಬಜೆಟ್ನಲ್ಲಿ ದಲಿತರು, ಒಬಿಸಿಯವರಿಗೆ ಏನು ನೀಡಿದೆ ?. ನಮ್ಮ ಸರ್ಕಾರ ದಲಿತರು, ಒಬಿಸಿಗೆ ಹೆಚ್ಚು ಅನುದಾನ ನೀಡಿತ್ತು.
ಆದರೆ ಕಾಂಗ್ರೆಸ್ ಸರ್ಕಾರ ಜನವಿರೋಧಿ, ಅತ್ಯಂತ ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ವಿದ್ಯುತ್ ದರ ಏರಿಕೆಯಾಗಿದೆ, ಮುಂದೆ ಹಾಲಿನ ದರವೂ ಏರುತ್ತೆ. ಈ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.