ಲಕ್ನೋ: ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲಿರುವ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಹಾಗೂ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Singh), ಮಣಿಪುರದಲ್ಲಿ ಇತ್ತೀಚೆಗೆ ನಡೆದ ಘಟನೆ ಖಂಡನೀಯ ಮತ್ತು ಸ್ವತಂತ್ರ ಭಾರತದಲ್ಲಿ ಇದು ದುಃಖಕರ ಘಟನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಣಿಪುರದಲ್ಲಿ (Manipur Violence) ಎರಡು ಬುಡಕಟ್ಟು ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಮೇ 4 ರಂದು ನಡೆದಿದೆ ಎನ್ನಲಾದ ಘಟನೆಯೊಂದರ ವೀಡಿಯೋ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಕೆಲ ಪುರುಷರು ದೌರ್ಜನ್ಯ ಎಸಗಿದ್ದರು. ಈ ದೃಶ್ಯದ ವೀಡಿಯೋ ವೈರಲ್ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.