ನವದೆಹಲಿ ;- ನೀವು ಏನಾದರೂ ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದರೆ ಚಿನ್ನಾಭರಣಗಳ ಬೆಲೆಗಳನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,160 ರೂಪಾಯಿ ಇದೆ. ನಿನ್ನೆ ಕೂಡ ಇದೇ ಬೆಲೆ ಇತ್ತು.
ಅದೇ ರೀತಿಯಾಗಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ರೂಪಾಯಿಗೆ ಬಂದು ನಿಂತಿದೆ. ಒಂದು ಕೆಜಿ ಬೆಳ್ಳಿ ಬೆಲೆ ಇಂದು 76,500 ರೂಪಾಯಿ ಇದೆ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.
ಇನ್ನೂ ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 60,160 ರೂಪಾಯಿ ಇದೆ. 22 ಕ್ಯಾರೆಟ್ ಚಿನ್ನದ ದರ 55,150 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಹೈದರಾಬಾದ್ ಮಾರುಕಟ್ಟೆಯಲ್ಲೂ ಒಂದು ಕೆಜಿ ಬೆಳ್ಳಿ ಬೆಲೆ 80,500 ರೂಪಾಯಿಗೆ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 55,150 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 60,160 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 80,500 ರೂಪಾಯಿಗೆ ಇದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 55,150 ರೂಪಾಯಿ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 60,160 ರೂಪಾಯಿಗೆ ಇಳಿದಿದೆ.