ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಯ ಸಂಸ್ಥೆಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದರು.
ಅರಣ್ಯ ಸಚಿವ ಈಶ್ವರ ಖಂಡ್ರೆ, ತೋಟಗಾರಿಕೆ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ , ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕಟಾರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.