ಬೆಂಗಳೂರು ;- ಕರವಾಳಿ ಸೇರಿ ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಸೇರಿ ಬಹುತೇಕ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಆಗಲಿದ್ದು, ರಾಜಧಾನಿಯಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮಧ್ಯಾಹ್ನದ ವೇಳೆಗೆ ಒಂದೆರಡು ಕಡೆ ಮಳೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಜಿಲ್ಲೆಗಳಿಗೆ ಎರಡು ದಿನ ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.
ಹೀಗಾಗಿ ಎರಡು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.