ಉಡುಪಿ: ಉಡುಪಿ ಪ್ರಕರಣದಲ್ಲಿ ಇನ್ನೂ ಎಷ್ಟು ವಿಡಿಯೋಗಳು ಇದ್ದಿರಬಹುದು. ಪೊಲೀಸರು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಬಾರದು. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅವರ ಪರವಾಗಿ ಕೆಲಸ ಮಾಡುವುದು. ಕಾಂಗ್ರೆಸ್ ಇದ್ದಾಗ ಅವರ ಪರ ಪೊಲೀಸರು ಕೆಲಸ ಮಾಡಬಾರದು. ಪ್ರಕರಣದ ಬಗ್ಗೆ ಗೃಹ ಸಚಿವರು ಮಕ್ಕಳಾಟ ಎಂದು ಹೇಳಿಕೆ ನೀಡಿದ್ದಾರೆ. ಪರೋಕ್ಷವಾಗಿ ಪ್ರಕರಣ ಮುಚ್ಚಿ ಹಾಕುವಂತೆ ಪೊಲೀಸರಿಗೆ ಹೇಳಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಹೇಳಿದರು.