ಬೆಂಗಳೂರು ;- 40% ಕಮೀಷನ್ ಆರೋಪದ ಬಗ್ಗೆ ತನಿಖೆಗೆ ನಿರ್ಧಾರ ಮಾಡಿದ ವಿಚಾರದ ಕುರಿತು ಮಾಜಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖಂಡಿತ ತನಿಖೆ ಮಾಡಲಿ, ಸತ್ಯ ಬಯಲಿಗೆಳೆಯಲಿ. 40% ಯಾರು ಯಾರಿಗೆ ಕೊಟ್ಟಿದ್ದಾರೆ ಎಂಬುದು ತನಿಖೆಯಾಗಲಿ.
ಯಾರಿಗೂ ಇದರ ಮಾಹಿತಿ ಇಲ್ಲ. ಯಾರ ಮೇಲೆ ಆರೋಪ ಇತ್ತು ಎಂಬುದನ್ನು ಸರ್ಕಾರ ಬಹಿರಂಗಪಡಿಸಲಿ. ಹಾಗೆಯೇ ನೈಸ್ ಅಕ್ರಮ ಬಗ್ಗೆ ಸದನ ಸಮಿತಿ ವರದಿ ಕೊಟ್ಟಿದೆ. ಅರ್ಕಾವತಿ ರೀಡೂ ಅಕ್ರಮ ಬಗ್ಗೆಯೂ ವರದಿ ಕೊಡಲಾಗಿದೆ. ಅದರ ಮೇಲೆ ಸರ್ಕಾರ ತನಿಖೆ ಮಾಡಲಿ, ಆಗ ಈಗಿನ ಸರ್ಕಾರದ ಮೇಲೆ ನಂಬಿಕೆ ಹೆಚ್ಚಾಗುತ್ತೆ. ಇಲ್ಲದಿದ್ದರೆ ಒಳಸಂಚು ಮಾಡಿರುವ ಅನುಮಾನ ಬರುತ್ತದೆ” ಎಂದು ಹೇಳಿದರು.