ಆಗಸ್ಟ್ 24ಕ್ಕೆ ಗೃಹ ಲಕ್ಷ್ಮೀಗೆ ಚಾಲನೆ ನೀಡಲಾಗುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ;- ಆಗಸ್ಟ್ 24ಕ್ಕೆ ಗೃಹ ಲಕ್ಷ್ಮೀಗೆ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿತ್ತು. ಅದಂತೆ ಜೂನ್ 11 ರಂದು ‘ಶಕ್ತಿ’ ಯೋಜನೆ ಜಾರಿಗೊಳಿಸಿದೆ.
ಪ್ರತಿ ದಿನ ಸುಮಾರು 55 ಲಕ್ಷ ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದಿದ್ದು, ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ. ಬಡತನ ಹಿಂಸೆಯ ಅತಿ ಕೆಟ್ಟ ರೂಪ ಎಂದು ಮಹಾತ್ಮಾ ಗಾಂಧಿ ಹೇಳಿದ್ದಾರೆ. ಹಸಿವು ಮುಕ್ತ ಕರ್ನಾಟಕ್ಕಾಗಿ “ಅನ್ನ ಭಾಗ್ಯ” ಯೋಜನೆಯಡಿ 10 ಕೆ.ಜಿ. ಆಹಾರ ಧಾನ್ಯ ನೀಡಲು ಘೋಷಿಸಲಾಗಿತ್ತು.
ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಹಕರಿಸದ ಕಾರಣ, 5 ಕೆ.ಜಿ ಅಕ್ಕಿಯ ಬದಲು ತಲಾ 170 ರೂ. ಗಳನ್ನು 1.30 ಲಕ್ಷ ಕುಟಟುಂಬಕ್ಕೆ ಡಿ.ಬಿ.ಟಿ. ಮೂಲಕ ನೀಡಲಾಗುತ್ತಿದೆ. “ಗೃಹ ಜ್ಯೋತಿ” ಕಾರ್ಯಕ್ರಮದಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, 1.41 ಕೋಟಿ ಜನರ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಡಿಸೆಂಬರ್-ಜನವರಿಯಲ್ಲಿ ನಿರುದ್ಯೋಗಿಳಗೆ ಕ್ರಮವಾಗಿ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆ ಸಹ ಜಾರಿಗೊಳಿಸಲಾಗುವುದು ಎಂದು ಸಿ.ಎಂ. ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ತಿಳಿಸಿದರು.

Loading

Leave a Reply

Your email address will not be published. Required fields are marked *