ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯ 33 ವರ್ಷದ ಶಿಕ್ಷಕ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಶಿಕ್ಷಕನ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಮಕ್ಕಳ ಬಾಳಿಗೆ ಬೆಳಕು ತೋರಿಸಿಕೊಡುವ ಶಿಕ್ಷಕ ಹುದ್ದೆ ಸಾಮಾನ್ಯವಾದದಲ್ಲ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಆತನ ಪಾತ್ರ ಬಹಳ ದೊಡ್ಡದು. ಆದರೆ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು ಮಾಡಿ, ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ