ಬೆಂಗಳೂರು: ನಟ ವಿಜಯ ರಾಘವೇಂದ್ರ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ. .ಕುಟುಂಬ ಸಮೇತ ವಿದೇಶಕ್ಕೆ ತೆರಳಿದ್ದಾಗ ಹಾರ್ಟ್ ಅಟ್ಯಾಕ್ ಆಗಿದ್ದು ರಾಜ್ ಕುಟುಂಬಕ್ಕೆ ಮತ್ತೆ ದೊಡ್ಡ ಆಘಾತವಾಗಿದೆ ಎನ್ನಬಹುದು.
ನಟ ವಿಜಯ ರಾಘವೇಂದ್ರ ಅಭಿಮಾನಿಗಳಿಗೆ ದೊಡ್ಡ ಶಾಕಿಂಗ್ ಸುದ್ದಿ ಎಂದೇ ಹೇಳಬಹುದು.
ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದಾಗ ಲೋ ಬಿಪಿ, ತಕ್ಷಣ ಹೃದಯಾಘಾತವಾಗಿದ್ದಾಗ ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ ಆದರೆ ಕೊನೆಯುಸಿರೆಳೆದಿದ್ದಾರೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್ ಪೊಲೀಸ್ ಆಫೀಸರ್ ಬಿ.ಕೆ ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.