ಬಿಲ್ ಪಾವತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಗುತ್ತಿಗೆದಾರರ ದೂರು ನೀಡಿದ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರಿಗೆ ದೂರು ಕೊಡಲಿ, ಸಿಎಂಗೂ ದೂರು ಕೊಡಲಿ. ನಮಗೂ ಸಾಕಷ್ಟು ವರದಿ ಬಂದಿದೆ, ನೈಜತೆ ಪರಿಶೀಲಿಸಿ ಎಂದಿದ್ದಾರೆ.
ಯಾರು ಕೆಲಸ ಮಾಡಿದ್ದಾರೋ ಅವರಿಗೆ ಬಿಲ್ ಪಾವತಿ ಮಾಡುತ್ತೇವೆ, ಹಲವು ನಕಲಿ ಬಿಲ್ಗಳು ನನ್ನ ಗಮನಕ್ಕೆ ಗಮನಕ್ಕೆ ಬಂದಿವೆ. ಈ ಬಗ್ಗೆ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗುತ್ತಿಗೆದಾರರು ಬ್ಲ್ಯಾಕ್ಮೇಲ್ ಅಲ್ಲ, ಪ್ರೀತಿ ತೋರಿಸುತ್ತಿದ್ದಾರೆ. ನ್ಯಾಯಬದ್ಧವಾಗಿ ಕೆಲಸ ಮಾಡಿದವರಿಗೆ ಹಣ ಸಿಗಲೇಬೇಕು ಎಂದರು.