ನವದೆಹಲಿ ;- ರಾಜಕೀಯದಲ್ಲಿ ರಾಹುಲ್ ಗಾಂಧಿ ತುಂಬಾ ವಿಫಲರಾಗಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಟೀಕೆ ಮಾಡಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ 13 ಬಾರಿ ಮೇಲೆತ್ತುವ ಪ್ರಯತ್ನ ಮಾಡಲಾಗಿದೆ. ಆದರೆ, ಪ್ರತಿ ಬಾರಿಯೂ ಅವರು ವಿಫಲರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದರು.
ಈಗಾಗಲೇ ಹೊತ್ತಿ ಉರಿಯುತ್ತಿರುವ ಬೆಂಕಿಗೆ ಮತ್ತೆ ಬೆಂಕಿ ಹಚ್ಚುವಲ್ಲಿ ರಾಹುಲ್ ಗಾಂಧಿ ಹೇಗೆ ಮುಂದಾಳತ್ವ ವಹಿಸಿದ್ದರು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ” ಎಂದು ವಾಗ್ದಾಳಿ ನಡೆಸಿದರು.
ಮಣಿಪುರವು ಜನಾಂಗೀಯ ಹಿಂಸಾಚಾರ ಇತಿಹಾಸ ಹೊಂದಿದೆ. ಇದು ಸಾಂಪ್ರದಾಯಿಕವಾಗಿ ಸೂಕ್ಷ್ಮ ರಾಜ್ಯ. ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಖಂಡನೀಯ. ಆದರೆ, ವಿಡಿಯೋ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಮೇ 4ರಂದು ಈ ವಿಡಿಯೋ ಚಿತ್ರೀಕರಿಸಲಾಗಿದೆ. ರಾಜಕೀಯ ಮಾಡಲು ಮುಂಗಾರು ಅಧಿವೇಶನಕ್ಕೆ ಮುನ್ನ ಬಿಡುಗಡೆ ಮಾಡಲು ಸಂರಕ್ಷಿಸಲಾಗಿತ್ತೇ” ಎಂದು ಪ್ರಶ್ನಿಸಿದರು.